ಕ್ರೈಂ ಸುದ್ದಿ:
ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ
ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ Four YouTubers attacked in Dharmasthala ಧರ್ಮಸ್ಥಳ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 60-70 ಜನರಿದ್ದ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಧರ್ಮಸ್ಥಳದ ಸಮೀಪದ ಸೌಜನ್ಯ ಅವರ ಮನೆಯ ಬಳಿ ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ…
ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ
ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…
ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು
ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…
RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ…
ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು
ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…
ಕಾರು ಮತ್ತು ಬೈಕ್ ಅಪಘಾತ – ಬೈಕ್ ಸವಾರ ಗಂಭೀರ.!
ಕಾರು ಮತ್ತು ಬೈಕ್ ಅಪಘಾತ – ಬೈಕ್ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…
HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು
HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…
ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ
ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…
ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು
ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….