ಕ್ರೈಂ ಸುದ್ದಿ:
ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು
ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…
ಕಾರು ಮತ್ತು ಬೈಕ್ ಅಪಘಾತ – ಬೈಕ್ ಸವಾರ ಗಂಭೀರ.!
ಕಾರು ಮತ್ತು ಬೈಕ್ ಅಪಘಾತ – ಬೈಕ್ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…
HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು
HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…
ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ
ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…
ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು
ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….
ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ
ಬಸ್ ಮತ್ತು ಲಾರಿ ಅಪಘಾತ – ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ…
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…
ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ
ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…
ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ
ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…