w
Headlines

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read Full News

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read Full News

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read Full News

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read Full News

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read Full News

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read Full News

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read Full News

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read Full News

ಸಾಗರದ ಹೆಸರಾಂತ ವೈದ್ಯೆಯ ಶವ ಗಣಪತಿ ಕೆರೆಯಲ್ಲಿ ಪತ್ತೆ :

ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಜಂಬಗಾರಿನ ನಿವಾಸಿ ಡಾ. ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದು, ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಬೈಕಿನಲ್ಲಿ ಹೊರಟವರು ರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ಬೈಕ್ ವಾಹನ ಪತ್ತೆಯಾಗಿತ್ತು. ತಕ್ಷಣ ಕೆರೆಯಲ್ಲಿ ಶೋಧಕಾರ್ಯ…

Read Full News

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read Full News

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read Full News

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full News

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read Full News

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read Full News

ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read Full News

ಆನಂದಪುರ ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ದಂಪತಿಗಳಿಗೆ ಗಾಯ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಅನಾಹುತ ಸಂಭವಿಸಿದೆ. ಅಮಟೆಕೊಪ್ಪ ದಿಂದ ಹಾಲುಗುಡ್ಡೆಗೆ ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇರುವಕ್ಕಿ ಬಳಿ   ಬೈಕ್ ನಲ್ಲಿ ಕೂತಿದ್ದ ಗಂಡ ಹೆಂಡತಿಯ ಮೇಲೆ ಚಲಿಸುತ್ತಿರುವಾಗಲೇ ಬೃಹತ್ ಆಕಾರದ ಮರ ಬಿದ್ದು ಬೈಕ್ ಸವಾರರಿಗೆ ತೀವ್ರ ಗಾಯವಾಗಿದೆ ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು  ಸ್ಥಳೀಯರ ಸಹಕಾರದಿಂದ ಇಬ್ಬರ ಜೀವ ಉಳಿದಂತಾಗಿದೆ. ಬೈಕ್ ಇದೀಗ ಮರದಡಿ ಅಪ್ಪಚ್ಚಿಯಾಗಿದ್ದು ತೆರವುಗೊಳಿಸುವ ಕಾರ್ಯ…

Read Full News

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read Full News

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read Full News

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read Full News

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read Full News

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read Full News

ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು

ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ  ನಗರದ ಓ.ಟಿ.ರಸ್ತೆಯ‌ಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ…

Read Full News

ರಿಪ್ಪನ್ ಪೇಟೆ ಸಮೀಪ ಬೆನವಳ್ಳಿಯಲ್ಲಿ ಬೈಕ್ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ತಿರುವಿನಲ್ಲಿ ಬೈಕ್ ಅಪಘಾತವಾಗಿ  ಆಯನೂರು ಮೂಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ  ನಡೆದಿದೆ. ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್(25) ಎಂಬ ಯುವಕ ಮೃತಪಟ್ಟ ದುರ್ದೈವಿ. ರಿಪ್ಪನ್ ಪೇಟೆ ಕಡೆಯಿಂದ ಆಯನೂರು ಕಡೆಗೆ ಟಿವಿಎಸ್ ಅಪಾಚೆ ಬೈಕ್ (KA 14 EP 9884) ನಲ್ಲಿ ತೆರಳುತ್ತಿರುವಾಗ ಬೆನವಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ ಈ ಸಂಧರ್ಭದಲ್ಲಿ ಹಿಂಬದಿ ಕುಳಿತಿದ್ದ ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್ ಕೆಳಗೆ…

Read Full News

ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು ನಬೀಲ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜಿಕೃಲ್ಲಾ ಖಾನ್’ನನ್ನು ಮೆಗ್ಗಾನ್…

Read Full News

ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಅಪಘಾತ : ಬೈಕ್ ಸವಾರ ಸಾವು

 ಸಾಗರ ತಾಲ್ಲೂಕು ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಮತ್ತು ದ್ವಿಚಕ್ರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾಗರ ಸಮೀಪದ ತಲವಾಟ ಗ್ರಾಮ ಪಂಚಾಯಿತಿ ಇಡುವಾಣಿ ಗ್ರಾಮದ ವಾಸಿಯಾದ ದ್ವಿಚಕ್ರ ವಾಹನ ಸವಾರ ಅನಿಲ್ ಎಂಬುವವನು ಮೃತಪಟ್ಟಿದ್ದು.ಮೃತ ವ್ಯಕ್ತಿಯ ತಂದೆ ಈಶ್ವರ ಎಂಬುವವರು ಗಂಭೀರ ಗಾಯಗೊಂಡಿದ್ದು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ…

Read Full News

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read Full News

ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ  ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read Full News

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read Full News

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read Full News

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ನಿನ್ನೆ ರಾತ್ರಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಅರಸಾಳು ಗ್ರಾಮದ ನಿವಾಸಿ ಹಾಗೂ ರಿಪ್ಪನ್ ಪೇಟೆ MSIL ಸಂಸ್ಥೆಯ ಉದ್ಯೋಗಿಯಾಗಿದ್ದ ನವೀನ್ (36) ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟೊಯೋಟಾ ಕಾರು ಹಾಗೂ ರಿಪ್ಪನ್ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತಿದ್ದಾಗ ಬೆನವಳ್ಳಿ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.