ಕ್ರೈಂ ಸುದ್ದಿ:
ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ
ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…
ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ
ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…
ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!
ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…
ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು
ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…
40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ
40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…
ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು
ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…
ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!
ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…
HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!
HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.! ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು…