Headlines

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read Full News

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read Full News

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…

Read Full News

ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ KSRTC ಬಸ್ಸುಗಳು ಸಂಚರಿಸುತ್ತಿಲ್ಲವೇಕೆ…?? ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ…???ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ…..?

ರಿಪ್ಪನ್ ಪೇಟೆ: ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು  ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ  ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ.  ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ  ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು  ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್…

Read Full News

ಮಲೆನಾಡಿನಲ್ಲಿ ಸ್ಯಾಟಲೈಟ್ ಪೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ : ಆರಗ ಜ್ಞಾನೇಂದ್ರ

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ…

Read Full News

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ…

Read Full News

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read Full News

ತಮ್ಮ ಕಾರ್ಯಕ್ಷೇತ್ರದ ಅಭಿವೃದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರ ಹೊಮ್ಮಬೇಕು : ಡಾ. ಡಿ ವೀರೇಂದ್ರ ಹೆಗ್ಗಡೆ

ಹುಂಚ : ತಮ್ಮ ಕಾರ್ಯಕ್ಷೇತ್ರದ ಅಭಿವದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರಹೊಮ್ಮಬೇಕು ಎಂದು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾರ್ಗದರ್ಶನ ನೀಡಿದ ಅವರು ಹೊಸನಗರ ತಾಲ್ಲೂಕಿನಲ್ಲಿ ಬಡವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯ ಮುಖೇನ ಸ್ವಸಹಾಯ ಸಂಘದ ಚಳುವಳಿ ಬಹಳ ಅರ್ಥಪೂರ್ಣವಾಗಿ ಸಾಗುತ್ತಿದೆ ಇದರೊಂದಿಗೆ ಈ ಭಾಗದ ಕೃಷಿ ಮತ್ತು ಕೃಷಿಯೇತರ…

Read Full News

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read Full News

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read Full News

ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರಾಕೇಶ್ ಸಿ ರವರಿಗೆ ಪಿಹೆಚ್‌ಡಿ ಪದವಿ ಪ್ರಧಾನ :

ರಿಪ್ಪನ್‌ ಪೇಟೆ:- ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ರಾಕೇಶ ಸಿ. ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ ರಾಕೇಶ್ ಸಿ ರವರು ಮಂಡಿಸಿದ “ಮೋಟಿವೇಶನಲ್ ಪಾಲಿಸಿಜ್ & ಪ್ರಾಕ್ಟಿಸಿಸ್ ಇನ್ ಎಂಎನ್ ಸಿಸ್ – ಎ ಕೇಸ್ ಸ್ಟಡಿ ಆಫ್ ಸೆಲೆಕ್ಟೆಡ್ ಎಂಎನ್ ಸಿಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲಿನ ಮಹಾ ಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.  ರಾಕೇಶ್…

Read Full News

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read Full News

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read Full News

ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :

ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ  ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…

Read Full News

ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read Full News

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read Full News

ಉದ್ಯಮಿ ಮಹೇಶ್ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ :

ಸಾಗರದ ಯುವ ಉದ್ಯಮಿ ರಾಯಲ್‌ ಬಿಲ್ಡರ್ಸ್ ಮಾಲೀಕ ಮಹೇಶ್ ಮೇಲೆ ರಾಜಕೀಯ ದುರುದ್ದೇಶದಿಂದ ಮತ್ತು ಶಾಸಕರ ಕುಮ್ಮಕ್ಕಿನಿಂದ ಹಾಗೂ ರೌಡಿಶೀಟರ್ ಅರುಣ್ ಕುಗ್ವೆ ರವರ ದ್ವೇಷದ ಹೇಳಿಕೆಯಿಂದ ವಿನಾಕಾರಣ ಪ್ರಥಮ ವರ್ತಮಾನ ವರದಿಯಲ್ಲಿ ಹೆಸರು ಸೇರ್ಪಡೆ ಮಾಡಿರುತ್ತಾರೆ.ಆದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಸಾಗರ ಗೆಳೆಯರ ಬಳಗದ ವತಿಯಿಂದ ಡಿವೈಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಸಲ್ಲಿಸಿದರು. ಶನಿವಾರ ರಾತ್ರಿ ನಡೆದ ಘಟನೆಗೂ ರಾಯಲ್ ಬಿಲ್ಡರ್ಸ್ ಮಾಲೀಕ…

Read Full News

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read Full News

ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read Full News

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ…

Read Full News

ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.  ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…

Read Full News

ರಾಜಕೀಯ ನಾಯಕರು ಪಕ್ಷ ಕಟ್ಟೋ ಕೆಲಸ ಬಿಟ್ಟು – ಊರು ಕಟ್ಟೋ ಕೆಲಸ ಮಾಡಲಿ : ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್

ರಿಪ್ಪನ್‌ಪೇಟೆ: ರಾಜಕೀಯ ಎಂಬುದು ರಾಷ್ಟ್ರೀಯ ಪಕ್ಷಗಳಲ್ಲಿ ಕೇವಲ ವೈಟ್ ಕಾಲರ್ ನಾಯಕರಿಗೆ ಸೀಮಿತವಾಗಿದ್ದು, ಬರೀ ಪಕ್ಷ ಸಂಘಟನೆಯೇ ಇವರ ದ್ಯೇಯವಾಗಿದೆ. ಇದರಿಂದ ಊರು ಅಭಿವೃದ್ಧಿ ಕಾಣಲಿಲ್ಲ ಎಂದು ತೀರ್ಥಹಳ್ಳಿಯ ಮುಂದಿನ ವಿಧಾನ ಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಜೆಡಿಎಸ್‌ ಯುವ ಮುಖಂಡ ಯಡೂರು ರಾಜಾರಾಮ್‌ ಅಸಮದಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜವಾದದ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಸಮಾಜವಾದಿ ಚಿಂತಕ ಗೋಪಾಲಗೌಡ ರವರ ಹೆಸರು ದುರ್ಬಳಕೆ ಮಾಡಿಕೊಂಡು ಎಲ್ಲಾ ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಅಧಿಕಾರದ…

Read Full News

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read Full News

ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ಸನ್ಮಾನ :

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಿಪ್ಪನ್‌ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ…

Read Full News

ಶಿವಮೊಗ್ಗ ಕೋರ್ಟ್ ನ ನ್ಯಾಯದೀಶರಿಗೆ ಹೃದಯಾಘಾತ : ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ

 ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತವಾಗಿದ್ದು, ಝೀರೋ ಟ್ರಾಫಿಕ್​ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ. ನ್ಯಾಯಾಧೀಶ ಸದಾನಂದ ಎಂ ಕಲಾಲ್ (61) ರವರಿಗೆ ಹೃದಯಾಘಾತವಾಗಿದೆ. ಸದ್ಯ ಶಿವಮೊಗ್ಗದಿಂದ ಆಂಬ್ಯುಲೆನ್ಸ್​ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದ್ದು, ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗಿದೆ. ನಂತರ ತುಮಕೂರು ನಗರದ ಮೂಲಕ ಬೆಂಗಳೂರಿಗೆ ಝೀರೋ ಟ್ರಾಫಿಕ್​ನಲ್ಲಿ ರವಾನಿಸಲಾಗುತ್ತದೆ.

Read Full News

ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಯು ವತಿಯಿಂದ ಮನವಿ

ಭದ್ರಾವತಿ : ದಿವಂಗತ ಬಿ ವಿ ಗಿರೀಶ್ ಹೆಸರನ್ನು ತಿಮ್ಮಾಪುರ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಭದ್ರಾವತಿ ನಗರಸಭೆ  ವ್ಯಾಪ್ತಿಯ 32ನೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನಗರಸಭೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ನಗರಸಭೆ ಆಯುಕ್ತರಿಗೆ  ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಕನ್ನಡಪರ ಹೋರಾಟಗಾರ ಭೋವಿ ಸಮಾಜದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಗಿದ್ದ ದಿವಂಗತ ಬಿ…

Read Full News

ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …

Read Full News

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read Full News

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹತಾಯಿ : ಎಲ್ಲಿ ಗೊತ್ತಾ…???? ಈ ಸುದ್ದಿ ನೋಡಿ….

ಅವಳಿ ಮಕ್ಕಳು ಜನಿಸುವುದು ಸಾಮಾನ್ಯ, ಇನ್ನೂ ಕೆಲವು ಮಹಿಳೆಯರು ತ್ರಿವಳಿ ಮಕ್ಕಳಿಗೂ ಜನ್ಮ ನೀಡಿದ ಉದಾಹರಣೆಗಳಿವೆ. ಆದರೆ ಒಟ್ಟಿಗೆ ನಾಲ್ಕು ಮಕ್ಕಳು ಹುಟ್ಟಿರುವುದು ಸ್ವಲ್ಪ ವಿರಳ. ಶಿವಮೊಗ್ಗದ ಮಹಿಳೆಯೊಬ್ಬರು ಒಂದೇ ಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಅಲ್ಮಾ ಬಾನು ಎಂಬುವವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ವಿಷಯವೇನೆಂದರೆ ಅಲ್ಮಾ ಬಾನು ಅವರಿಗೆ ಎರಡು ಗಂಡು, ಎರಡು ಹೆಣ್ಣು ಮಕ್ಕಳು ಜನಿಸಿವೆ. ಆರೀಫ್ ಮತ್ತು ಅಲ್ಮಾ…

Read Full News

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read Full News