Headlines

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read Full News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read Full News

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read Full News

ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…

Read Full News

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read Full News

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read Full News

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read Full News

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read Full News

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read Full News

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read Full News

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read Full News

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read Full News

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read Full News

ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read Full News

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read Full News

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read Full News

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಕಾಂಗ್ರೆಸ್ ಬೇಡಿಕೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪನವರ ಪಾತ್ರದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಈಶ್ವರಪ್ಪನವರ ಪಾತ್ರದ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಸಿಎಂ ಬೊಮ್ಮಾಯಿ ಅವರು ಸಹ ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು ತನಿಖೆಯಾಗಲಿ ಎಂದು ಗೃಹಸಚಿವ ಈಶ್ವರಪ್ಪನವರ ಪರ ಬ್ಯಾಟ್ ಬೀಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಉಡುಪಿ ಎಸ್ಪಿ ಜೊತೆ ಮಾತನಾಡಿದ್ದೇನೆ.ಎಫ್‌ಎಸ್ ಎಲ್…

Read Full News

ಸಚಿವ ಈಶ್ವರಪ್ಪ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ :

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಗುಂಡಪ್ಪ ಶೆಡ್ ಬಳಿ ಇರುವ ಸಚಿವ ಈಶ್ವರಪ್ಪ ನಿವಾಸದ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಗಡುಕ ಸಚಿವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ…

Read Full News

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read Full News

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read Full News

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read Full News

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read Full News

ಅನೈತಿಕ ಚಟುವಟಿಕೆಯ ತಾಣವಾಗಿರುವ ಹೊಸನಗರ ಪರಿವೀಕ್ಷಣಾ ಮಂದಿರ (ಐಬಿ) : ಸಂಜೆಯಾಗುತಿದ್ದಂತೆ ಕುಡುಕರದ್ದೇ ದರ್ಬಾರ್ ಇಲ್ಲಿ!!!!!!!!

ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ ಎಲ್ಲಾ ರೀತಿಯ ವಾತಾವರಣವು ನಿರ್ಮಾಣವಾಗಿದೆ.  ಹೌದು ಹೊಸನಗರ ತಾಲ್ಲೂಕಿನ ಆಸುಪಾಸಿನ ಹುಂಚದ ಪದ್ಮಾವತಿ ದೇವಸ್ಥಾನ, ರಾಮಚಂದ್ರಾಪುರ ಮಠ, ಕಾರಣಗಿರಿ(ಕಾರ್ಗಡಿ)ಯ ಗಣಪತಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹೀಗೆ ವಿವಿಧ ದೇವಾಲಯಗಳನ್ನು ವೀಕ್ಷಿಸಲು ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಹೊಸನಗರ ತಾಲ್ಲೂಕಿನ ಕೊಡಚಾದ್ರಿ…

Read Full News

ಶಿವಮೊಗ್ಗ ಜಿಲ್ಲೆಗೆ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ.. ಪರಿಹಾರ ಯಾವ ಕಾಲಕ್ಕೋ!!!!!!

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ಆಸ್ಪತ್ರೆಗೆ ಸೀಮಾ ಬಾನು ಚಿಕಿತ್ಸೆಗೆ ಬಂದಾಗ ಶುಶ್ರೂಷಕಿಯರು ಜಿಲ್ಲಾ ವೈರಾಣು ಪರೀಕ್ಷಾ ಕೇಂದ್ರಕ್ಕೆ ಅವರ…

Read Full News

ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!

ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು. ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ  ಹೋರಾಟದ ಪೂರ್ವಭಾವಿ ರೂಪುರೇಷಗಳನ್ನು ಚರ್ಚಿಸುವುದಕ್ಕಾಗಿ ಇಂದು ಸರ್ವಧರ್ಮದ ಪ್ರಮುಖರು, ಸರ್ವ ಪಕ್ಷದ ಪ್ರಮುಖರು ಹಾಗೂ ಹೊಸನಗರ ತಾಲೂಕಿನ ನಾಗರಿಕರು ಉಪಸ್ಥಿತರಿದ್ದರು. ಈ ಸಭೆಯ ಉದ್ದೇಶ ಸಂಘಟನೆ ಮತ್ತು ಹೋರಾಟದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಬೇಕಾದಂತಹ ಯೋಜನೆಯನ್ನು ರೂಪಿಸುವುದಾಗಿತ್ತು ಅದರಂತೆ ಉಪಸ್ಥಿತರಿದ್ದ ಮುಖಂಡರುಗಳು…

Read Full News

ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಗೃಹಸಚಿವರು ಹೇಳಿಕೆ ನೀಡುತ್ತಿದ್ದಾರೆ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

 ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು  ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.  ಆರಗ ಮಾತನಾಡುವ ರೀತಿ ನೋಡಿದರೆ ಸಣ್ಣ ಮಕ್ಕಳು ಸಹ ಆ ರೀತಿ ಮಾತನಾಡುವುದಿಲ್ಲ. ಆರಗ ತಮ್ಮ ನೇತೃತ್ವದಲ್ಲಿ ಇರುವ ಅಧಿಕಾರಿಗಳ ಮಾಹಿತಿ ತೆಗೆದುಕೊಳ್ಳದೆ ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಹೇಳಿಕೆ ನೀಡಿದ್ದಾರೆ.  ರಾಜ್ಯದಲ್ಲಿ ಕೋಮು ಪ್ರಚೋದನೆಗೆ ಗೃಹಸಚಿವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.  ಯಾವ ವ್ಯಕ್ತಿ ಸತ್ತರು…

Read Full News

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ ಪದವಿಧರೆ. ಮನೆಯಲ್ಲಿಯೇ ಇದ್ದ ಯುವತಿಯ ಬಳಿ ಆಂಡ್ರಯ್ಡ್ ಮೊಬೈಲ್ ಹೊಂದಿದ್ದಳು.ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ಹೊಂದಿದ್ದ ಯುವತಿಗೆ ಪದೇ ಪದೇ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆತ್ತೆಲೆ ವಿಡಿಯೋ ಹಾಕದಿದ್ದರೆ ನಿನ್ನ ಫೋಟೊ ಎಡಿಟ್ ಮಾಡಿ ಬೆತ್ತಲೆಯಾಗಿ ರಚಿಸಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಗೆ ಬೆಚ್ಚಿಬಿದ್ದ…

Read Full News

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read Full News

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read Full News

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read Full News