ಜಿಲ್ಲಾ ಸುದ್ದಿ:
Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ
Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…
ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ | Sagara
ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ – ಉಸ್ತುವಾರಿ ಸಚಿವ ಹಾಗೂ ಶಾಸಕರ ನಡೆ ಬೇಸರ ತರಿಸಿದೆ ಸಾಗರ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬುಧವಾರ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ…
Ripponpete | ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್
ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್ ರಿಪ್ಪನ್‌ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು. ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ…
Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ
Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…
ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು | KSE
ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು ಶಿವಮೊಗ್ಗ : ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು. …
ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV
ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು….
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಶಿವಮೊಗ್ಗ (Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಭಾರಿ ಗಾತ್ರದ ಗಾತ್ರದ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್ ಚಾನೆಲ್ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ….
Shivamogga | ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ
ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು. ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು….
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಸಮಿತಿ…
Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…