ಜಿಲ್ಲಾ ಸುದ್ದಿ:
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…
ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara
ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…
ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite
ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…
Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ
Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು…
Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ
ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಬುಧವಾರ ಆಯೋಜಿಸಲಾಗಿತ್ತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಈ ಅಪರೂಪದ ಮಕ್ಕಳ ಸಂತೆ…
ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News
ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…
ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet
ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….
Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್
Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್ ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು ಹಾಗೂ ಮರಾಠ ಸಮಾಜದ ಪ್ರಮುಖರಾದ ಸುಂದರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ…
Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ
ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…