
ಜಿಲ್ಲಾ ಸುದ್ದಿ:

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ ಮೊಹಮದ್ ಬಿಲಾಲ್ ಆಯ್ಕೆ
ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಶಿವಮೊಗ್ಗದ ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು
ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ
ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ
RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ
ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ
ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ
ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂವರು ವಿದ್ಯಾರ್ಥಿಗಳು ಸುಮಾರು 50 ನಿಮಿಷ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಸಾರ್ವಜನಿಕರು ಹತ್ತಿರಕ್ಕೂ ಬಾರದೆ , ಆಂಬುಲೆನ್ಸ್ ಗೂ ಕರೆ ಮಾಡದೇ ಮಾನವೀಯತೆ ಮರೆತ ವಿಚ್ಚಿದ್ರಾವಕಾರಿ ಘಟನೆ ಮಲೆನಾಡ ಹೆಬ್ಬಾಗಿಲು ಹೊಸನಗರ ತಾಲೂಕಿನ ಸೂಡೂರು ರೈಲ್ವೆ ಗೇಟ್ ಬಳಿ ನಡೆದಿರುವು…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು
RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…