ಜಿಲ್ಲಾ ಸುದ್ದಿ:
ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news
ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…
ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್
ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…
C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS
C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…
ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA
ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್ ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್ಐಎ (NIA) ನೋಟಿಸ್ ಜಾರಿ ಮಾಡಿದೆ. ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್ಗೆ ವಿಚಾರಣೆಗೆ ಹಾಜರಾಗುವಂತೆ ಎನ್ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ ಎನ್ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ. 2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ…
ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet
ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ ಆಗಬೇಕಾದರೆ ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…
ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ.? ದಾಖಲೆಗಳೇನು? ಇಲ್ಲಿದೆ ಮಾಹಿತಿ|election
ರಿಪ್ಪನ್‌ಪೇಟೆ : ಕೆಲವೇ ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗೋ ಸಾಧ್ಯತೆ ಇದೆ. ಇದಕ್ಕೂ ಮುನ್ನಾ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿ ತಯಾರಿಕೆ ಕೂಡ ಆರಂಭಗೊಂಡಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆಯನ್ನು ಚುನಾವಣಾ ಆಯೋಗ ಆರಂಭಿಸಿದೆ. ಇಂತಹ ಮತದಾರರ ಪಟ್ಟಿಗೆ ಪದವೀಧರರಾದಂತ ನೀವು ಅರ್ಜಿಯನ್ನು ಸಲ್ಲಿಸೋದು ಹೇಗೆ.? ಅರ್ಹತೆಗಳು ಏನು ಅನ್ನೋ ಬಗ್ಗೆ ಕೂಡ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ…
ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal
ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ. ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ. ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ…
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…
ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru
ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…
ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad
ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…