ಜಿಲ್ಲಾ ಸುದ್ದಿ:
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ…
ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news
ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ ನಲಿಕಲಿ ತರಗತಿಯ ಶಿಕ್ಷಕ ಪಾಠ ಓದಲು ಪುಸ್ತಕ ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್ ಶಿಕ್ಷಕರ ಅಣತಿಯಂತೆ ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ ಮಲಗಿದ್ದ ಹಾವನ್ನು ಕಂಡಿದ್ದಾನೆ. ತನ್ನ ಪಕ್ಕದಲ್ಲಿ ಕುಳಿತಿದ್ದ…
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…
ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja
ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…
ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ|Rpet news
ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ರಿಪ್ಪನ್‌ಪೇಟೆ : ಹೆದ್ದಾರಿಪುರದಲ್ಲಿ ಬುಧವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ಹಾಗೂ ಬಾಲಕಿಯರ ಖೋಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ಪ್ರಥಮ,ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ,ಥ್ರೋ ಬಾಲ್ ನಲ್ಲಿ ಬಾಲಕರ ತಂಡ…
ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ
ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 352ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.
ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ|Shivamogga police
ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ ಶಿವಮೊಗ್ಗ : ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ. ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…
ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport
ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಡಿಜಿಟಲ್ ಮಾಹಿತಿ ಫಲಕದ ಫೋಟೋ ಶೇರ್ ಮಾಡಿ, ಹಿಂದಿ ಹೇರಿಕೆ ಸರಿಯಲ್ಲ ಎಂದು ದೂರಿದ್ದಾರೆ. ಇದು ಯಾವುದೋ ಹಿಂದಿ ರಾಜ್ಯವಲ್ಲ….
ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news
ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು. ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು…