ಜಿಲ್ಲಾ ಸುದ್ದಿ:
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ – ಸಂಸದ ಬಿ ವೈ ರಾಘವೇಂದ್ರ|BYR
ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ವಿನೋಬನಗರದ ಪಿಎನ್‌ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ…
ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP
ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…
ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ
ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…
ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college
ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ ಮಾರುಹೋಗಿ ತಮ್ಮ ಅಮೂಲ್ಯವಾದ ಶೈಕ್ಷಣಿಕ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ಯುವ ಪೀಳಿಗೆ ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…
77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ
77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…
ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ
ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ : ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಆಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ. ಈ ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara
ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…
ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan
ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…
ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ
ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ. ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ. ವಿಷಯ…
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ-ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ, ಬ್ಯಾಂಕ್‌ಗಳು, ಅರಣ್ಯ…