ಜಿಲ್ಲಾ ಸುದ್ದಿ:
ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job
2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…
ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…
ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement
ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….
ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs
ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ ,…
ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest
ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…
ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala
ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು…
ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ|taxi parking issues
ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು…
ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News
ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….
ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…
ಸಾಗರ : ಜೈನಮುನಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ|Protest
ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಖಂಡಿಸಿ ಇಂದು ಸಾಗರದಲ್ಲಿ ಬಿಜೆಪಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ…