ಜಿಲ್ಲಾ ಸುದ್ದಿ:
ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…
ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula
ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…
ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR
ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…
ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers
ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು. ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…
ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ
ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…
ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest
ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…
ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK
ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್ ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…
ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ
ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…