Headlines

ರಿಪ್ಪನ್‌ಪೇಟೆ : ಕ್ಷತ್ರಿಯ ಮರಾಠ ಯುವ ವೇದಿಕೆಗೆ ಜಾಗ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ – ಶಾಸಕರಿಗೆ ಅಭಿನಂದನೆ ಸಲ್ಲಿಕೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಕ್ಷತ್ರೀಯ ಮರಾಠ ಯುವ ವೇದಿಕೆಯ ಬಹುವರ್ಷಗಳ ಬೇಡಿಕೆಯನ್ನು ಹರತಾಳು ಹಾಲಪ್ಪ ರವರ ವಿಶೇಷ ಪ್ರಯತ್ನದಿಂದ ಈಡೇರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಗರ -ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರ ವಿಶೇಷ ಪ್ರಯತ್ನದಿಂದ ಹೊಸನಗರ ತಾಲೂಕಿನ ರಿಪ್ಪನಪೇಟೆಯ “ಕ್ಷತ್ರಿಯ ಮರಾಠ ಯುವ ವೇದಿಕೆ” ಯ ಬಹು ವರ್ಷಗಳ ಬೇಡಿಕೆಯಾಗಿದ್ದ, ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕೆ ಕೆರೆಹಳ್ಳಿ ಗ್ರಾಮದ ಸ.ನಂ 37 ರಲ್ಲಿ, 2…

Read More

ರಿಪ್ಪನ್‌ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ಮುಖ್ಯ ಶಿಕ್ಷಕಿಯ ವರ್ಗಾವಣೆ – ಶಾಲೆಗೆ ಬೀಗ ಹಾಕಿ ಮಕ್ಕಳ ಪ್ರತಿಭಟನೆ ! school

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ. ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ. ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ…

Read More