ಜಿಲ್ಲಾ ಸುದ್ದಿ:
ಪಿಂಪ್ ಕೆಲಸ ಮಾಡುವವರ ಬಳಿ ಹಣ ಮಾಡಿಕೊಳ್ಳುವ ಸಂಧರ್ಭ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುವೆ – ಗೃಹಸಚಿವ ಆರಗ ಜ್ಞಾನೇಂದ್ರ|araga
ಕುಖ್ಯಾತ ಕ್ರಿಮಿನಲ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಮನೆಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಲ್ಲರ ಕ್ಯಾರೆಕ್ಟರ್ ಸರ್ಟಿಫಿಕೇಟ್ ನೋಡಿ ಒಳಗೆ ಬಿಡಲಾಗುವುದಿಲ್ಲ. ಹೀಗಿರುವಾಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿನಾಕಾರಣ ನನ್ನ ಹೆಸರು ಹೇಳಿ ಗೊಂದಲ ಹುಟ್ಟಿಸುತ್ತಿರುವುದು ಅವರ ಘನತೆಗೆ ತಕ್ಕುದಲ್ಲ. ರವಿಯ ಜತೆಗೆ ನನಗೆ ಸಂಪರ್ಕ ಇದ್ದರೆ. ಅವನನ್ನು ಬಂಧಿಸದಂತೆ ತಡೆಯುವುದು ದೊಡ್ಡ ವಿಚಾರವಾಗಿರಲಿಲ್ಲ. ಅಂಥವನ ಹತ್ತಿರ ದುಡ್ಡು ತೆಗೆದುಕೊಳ್ಳುವ ಸಂದರ್ಭ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು…
ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet
ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC
ರಿಪ್ಪನ್‌ಪೇಟೆ : ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…
ಹೊಸನಗರ ಬ್ಲಾಕ್ ಕಾಂಗ್ರೆಸ್ (ಅ) ಘಟಕದ ನೂತನ ಅಧ್ಯಕ್ಷರಾಗಿ ಆಸೀಫ಼್ ಭಾಷಾ ನೇಮಕ|congress
ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ…
ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ
ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…
ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane
ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….
ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…
ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ
ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…
ಅಮ್ಮನಘಟ್ಟ ಕಪ್ಪು ಬಾವುಟ ಪ್ರದರ್ಶನ ಪ್ರಕರಣ – ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ವಿರುದ್ದ ಪ್ರತಿಭಟನೆಯೇ ಹೊರತು ಶಾಸಕರ ವಿರುದ್ದವಲ್ಲ – ಚಿದಂಬರಂ ಸ್ಪಷ್ಟನೆ|black
ರಿಪ್ಪನ್‌ಪೇಟೆ : ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕರ ವಿರುದ್ದವಲ್ಲ ಎಂದು ಮಾರುತಿಪುರ ಗ್ರಾಪಂ ಅಧ್ಯಕ್ಷ ಎಚ್ ಬಿ ಚಿದಂಬರ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಚಿದಂಬರಂ ಬಳಿ ದೂರವಾಣಿ ಮೂಲಕ ಸ್ಪಷ್ಟನೆ ಕೇಳಿದಾಗ ಮಾತನಾಡಿದ ಅವರು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದು ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ…
ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa
ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…