ಜಿಲ್ಲಾ ಸುದ್ದಿ:
ರಿಪ್ಪನ್‌ಪೇಟೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ : ಗಮನಸೆಳೆದ ಗಣವೇಷಧಾರಿಗಳು – ಕಲ್ಲಡ್ಕ ಪ್ರಭಾಕರ್ ಭಟ್ ರವರಿಂದ ಪುಷ್ಪಾರ್ಚನೆ|RSS
ರಿಪ್ಪನ್‌ಪೇಟೆ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕರು ಪಟ್ಟಣದಲ್ಲಿ ಇಂದು ಗಣವೇಷ ಧರಿಸಿ ಪಥಸಂಚಲನ ನಡೆಸಿದರು. ಪಟ್ಟಣದ ಹೊಸನಗರ ರಸ್ತೆಯ ರಾಮಮಂದಿರದಿಂದ ಆರಂಭವಾದ ಪಥಸಂಚಲನ, ತೀರ್ಥಹಳ್ಳಿ ರಸ್ತೆ ಮಾರ್ಗವಾಗಿ ಚೌಡೇಶ್ವರಿ ಬೀದಿಯಿಂದ ಹಳೇ ಸಂತೆ ಮಾರ್ಕೇಟ್ ರಸ್ತೆಯಿಂದ ವಿನಾಯಕ ವೃತ್ತಕ್ಕೆ ಆಗಮಿಸಿ ಸಾಗರ ರಸ್ತೆಯ ಮೂಲಕ ಪಥಸಂಚಲನ ಸಾಗಿತು. ವಿನಾಯಕ ವೃತ್ತದಲ್ಲಿ ಅಲಂಕೃತ ವಾಹನದಲ್ಲಿದ್ದ ಡಾ.ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಭಾವಚಿತ್ರಕ್ಕೆ ನಾಗರೀಕರು ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ ಪುಷ್ಪಾರ್ಚನೆ ಸಲ್ಲಿಸಿದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar
ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್‌ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…
ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet
ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್. ದಿನೇಶ್‌ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…
ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS
ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara
ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…
ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara
ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…
ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…
ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಲಿಫ್ಟ್ನಲ್ಲಿ ಬ್ಯಾಗ್…