Headlines

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|Ripponpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್    ಅವರು ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ ನೃತ್ಯ, …

Read More