
ಜಿಲ್ಲಾ ಸುದ್ದಿ:
ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್ ಯಾವುದೇ…
ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ
ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…
ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್
ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು. ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು. ಇನ್ನು ಬಿಡುಗಡೆಗೆ ಸಿದ್ದವಾಗಿರುವ…
ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…
ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :
ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…