ಜಿಲ್ಲಾ ಸುದ್ದಿ:
ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga
ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…
ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale
ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…
ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru
ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…
ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory
ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…
ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet
ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…
ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಕಿಮ್ಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ | ಶಿವಮೊಗ್ಗದಲ್ಲೊಂದು 7 ಚಕ್ರದ ಹೈಟೆಕ್ ಆಟೋ -ಏನಿದರ ವಿಶೇಷ??? ಸುದ್ದಿ ನೋಡಿ
ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿ ಬಂಡೆಯಲ್ಲಿ ಕಾರ್ಮಿಕರಿಗೆ ಭೂ ಮತ್ತು ಗಣಿ ಅಧಿಕಾರಿಗಳು ಹಿಂಸೆ ನೀಡುತ್ತಿರುವುದನ್ನು ಖಂಡಿಸಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ನೆಡೆಸುತ್ತಿದ್ದಾರೆ. ಗೃಹ ಸಚಿವರು ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಂಡೆ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದರಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಯೊಳಗಾಗಿ ಅವರ ಸಮಸ್ಯೆ ಬಗೆಹರಿಸಿದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…
ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…
ರಿಪ್ಪನ್‌ಪೇಟೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ : ಗಮನಸೆಳೆದ ಗಣವೇಷಧಾರಿಗಳು – ಕಲ್ಲಡ್ಕ ಪ್ರಭಾಕರ್ ಭಟ್ ರವರಿಂದ ಪುಷ್ಪಾರ್ಚನೆ|RSS
ರಿಪ್ಪನ್‌ಪೇಟೆ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕರು ಪಟ್ಟಣದಲ್ಲಿ ಇಂದು ಗಣವೇಷ ಧರಿಸಿ ಪಥಸಂಚಲನ ನಡೆಸಿದರು. ಪಟ್ಟಣದ ಹೊಸನಗರ ರಸ್ತೆಯ ರಾಮಮಂದಿರದಿಂದ ಆರಂಭವಾದ ಪಥಸಂಚಲನ, ತೀರ್ಥಹಳ್ಳಿ ರಸ್ತೆ ಮಾರ್ಗವಾಗಿ ಚೌಡೇಶ್ವರಿ ಬೀದಿಯಿಂದ ಹಳೇ ಸಂತೆ ಮಾರ್ಕೇಟ್ ರಸ್ತೆಯಿಂದ ವಿನಾಯಕ ವೃತ್ತಕ್ಕೆ ಆಗಮಿಸಿ ಸಾಗರ ರಸ್ತೆಯ ಮೂಲಕ ಪಥಸಂಚಲನ ಸಾಗಿತು. ವಿನಾಯಕ ವೃತ್ತದಲ್ಲಿ ಅಲಂಕೃತ ವಾಹನದಲ್ಲಿದ್ದ ಡಾ.ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಭಾವಚಿತ್ರಕ್ಕೆ ನಾಗರೀಕರು ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ ಪುಷ್ಪಾರ್ಚನೆ ಸಲ್ಲಿಸಿದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar
ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್‌ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…