Headlines

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…

Read More

ಆಗಸ್ಟ್ 2ಕ್ಕೆ ಇತಿಹಾಸ ಪ್ರಸಿದ್ಧ ನಾಗರಹಳ್ಳಿ ಜಾತ್ರಾ ಮಹೋತ್ಸವ :

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ಶ್ರೀ ನಾಗೇಂದ್ರಸ್ವಾಮಿಯ ದೇವಸ್ಥಾನದಲ್ಲಿ 02-08-2022  ರ ಮಂಗಳವಾರ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಏರ್ಪಡಿಸಲಾಗಿದೆ. ಅಗಸ್ಟ್ 02 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚಾ ಸಮೀಪದ ನಾಗರಹಳ್ಳಿಯ ಶ್ರೀ ನಾಗೇದ್ರಸ್ವಾಮಿಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಹಾಗೂ ಮಧ್ಯಾಹ್ನ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾಗೇಂದ್ರಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಗೇರುಗಲ್ ಸತೀಶ್ ತಿಳಿಸಿದ್ದಾರೆ.

Read More

ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.  ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…

Read More

ಕಸ್ತೂರಿ ರಂಗನ್ ವರದಿಗೆ ತಾತ್ಕಾಲಿಕ ಬ್ರೇಕ್ : ನಿಟ್ಟುಸಿರು ಬಿಟ್ಟ ಮಲೆನಾಡಿಗರು

ಪಶ್ಚಿಮ ಘಟ್ಟ ಪ್ರದೇಶಗಳ ಜನಜೀವನದಲ್ಲಿ ಭಯ ಹುಟ್ಟಿಸಿರುವ ಡಾ. ಕೆ. ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಜಾರಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಮಿತಿಗೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ. ವರದಿ ಜಾರಿಗೆ ತಾತ್ಕಾಲಿತ ತಡೆ ನೀಡಲಾಗಿದೆ ಎಂದಿರುವ ಭೂಪೇಂದ್ರ ಯಾದವ್‌, ವಸ್ತುಸ್ಥಿತಿ ಅಧ್ಯಯನಕ್ಕೆ ಐಎಫ್‌ಎಸ್‌ ಅಧಿಕಾರಿ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಪಶ್ಚಿಮಘಟ್ಟ…

Read More

ಬೇಳೂರು ಅಲೆಮಾರಿ ರಾಜಕಾರಣ ಬಿಟ್ಟು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲಿ : ವೀರೇಶ್ ಆಲುವಳ್ಳಿ ವಾಗ್ದಾಳಿ

ಹೊಸನಗರ: ನೀವು ಇನ್ನೂ ಮುಂದೆಯು ರಾಜಕೀಯ ಅಲೆಮಾರಿಯಾಗೆ ಇರ್ತಿರಿ, ಮೊದಲು ನಿಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿಯಲ‌್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಇದುವರೆಗೂ ಬಿ ಫಾರಂ ಸಿಗದೆ ಹತಾಶರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಏಕವಚನದಲಲ್ಲದೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಗಾರಪ್ಪವರು…

Read More

ಕಿಮ್ಮನೆ ರತ್ನಾಕರ್ ಮಂಜುನಾಥ್ ಗೌಡರಿಗೆ ಬರೆದ ಬಹಿರಂಗ ಪತ್ರದಿಂದ ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!!!!

ತೀರ್ಥಹಳ್ಳಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರ ನಡುವಿನ ಮುಸುಕಿನ ಗುದ್ದಾಟ ಇದೆ ಎಂದು ಹಲವರು ಹೇಳುತ್ತಿದ್ದರು ಅದೆಲ್ಲೂ ಕೂಡ ಬಹಿರಂಗವಾಗಿರಲಿಲ್ಲ. ಆದರೆ ಇದೀಗ  ಕಿಮ್ಮನೆ ರತ್ನಾಕರ್ ರವರು  ಮಂಜುನಾಥಗೌಡರಿಗೆ ಬರೆದಿರುವ ಬಹಿರಂಗ ಪತ್ರ ನೋಡಿದರೆ ಇಬ್ಬರ ಮದ್ಯೆ ಮತ್ತೇ ವಾರ್  ಶುರುವಾದಂತೆ ಕಾಣುತ್ತಿದೆ. ಆರ್.ಎಂ.ಮಂಜುನಾಥ್ ಗೌಡರ ಪಾದಯಾತ್ರೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್ ಆಗಸ್ಟ್ 8 ರ ಸೋಮವಾರ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ…

Read More

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಕುಡಿದ ಅಮಲಿನಲ್ಲಿ ತೂರಾಟ : ವೀಡಿಯೋ ವೈರಲ್

 ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.  ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More