ಜಿಲ್ಲಾ ಸುದ್ದಿ:
ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ
ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….
ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…
ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…
ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ
ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…
ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ
ರಿಪ್ಪನ್‍ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್‍ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ
ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…
ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…
ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…
ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :
ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…
ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು
ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…
ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…