ಜಿಲ್ಲಾ ಸುದ್ದಿ:
ಶಿವಮೊಗ್ಗ ವಿಮಾನ ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆ : ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ವಿಮಾನ ನಿಲ್ದಾಣವು ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ 2ನೇ ಅತಿ ಉದ್ದದ ರನ್ ವೇ ಹೊಂದಿರುವಂತ ವಿಮಾನ ನಿಲ್ದಾಣ ಇದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಸದ ಬಿ.ವೈ.ರಾಘವೇಂದ್ರ, ಇಂದು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿ ಮಾಡಿದ್ದೇನೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ…
ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು
ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…
ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :
ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…
ಶಿವಮೊಗ್ಗದ ಬಾಪೂಜಿ ಕಾಲೇಜಿನಲ್ಲಿ ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಿಸಿದ NSUI
ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು. ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್ಎಸ್ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು. ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ…
ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :
ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ. ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…
ಶಾಸಕ ಹಾಲಪ್ಪರವರ ಎದುರೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ವೀಡಿಯೋ ವೈರಲ್ : ತಾರಕಕ್ಕೇರಿದ ಸಾಗರದ ಜ್ಯೂನಿಯರ್ ಕಾಲೇಜಿನ ಹಿಜಾಬ್ – ಕೇಸರಿ ಘರ್ಷಣೆ !!!!!!
ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರವಾಗಿ ಇಂದು ಬೆಳಿಗ್ಗೆ ಕಾಲೇಜಿನ ಆವರಣದ ಬಳಿ ಮಾತಿನ ಚಕಮಕಿ ನಡೆಯುತ್ತಿತ್ತು.ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು ಇದರ ನಡುವೆ ಸಣ್ಣಪುಟ್ಟ ಗಲಾಟೆ ನಡೆದಿದ್ದು ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಇದನ್ನು ಮನಗಂಡ ಶಾಸಕ ಹರತಾಳು ಹಾಲಪ್ಪನವರು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳ ಸಮೂಹ ಶಾಸಕ ಹರತಾಳು ಹಾಲಪ್ಪ ನವರ ಆಸ್ಪತ್ರೆಯ ಭೇಟಿಯಲ್ಲೂ ಹಾಜರಿದ್ದರು.ಇದರ ನಡುವೆ ವಿದ್ಯಾರ್ಥಿಗಳು…
ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ 144 ಸೆಕ್ಷನ್ ಜಾರಿ : ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳ ವಶ !!!!!!!
ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ ಅನ್ಯಕೋಮಿನ ಯುವಕರ ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು ಕೆಲ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದರು. ಲಷ್ಕರ್ ಮೊಹಲ್ಲಾದಲ್ಲಿ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಂತರ ಬಾಪೂಜಿ ನಗರ ಕಾಲೇಜಿನಲ್ಲಿ ಹಿಜಬ್ ಬೆಂಬಲಿಸಿದ ಯುವಕರನ್ನ ಕೊಠಡಿಯಲ್ಲಿ ಕೂರಿಸಲಾಗಿದ್ದು ನಂತರ ಬಿಡುಗಡೆ ಮಾಡಲಾಯಿತು. ಈ ವೇಳೆ ನಾರೇ ತಕಬ್ಈರ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಲಾಯಿತು. ನಂತರ…
“ಸಾಗರದ ಜ್ಯೂನಿಯರ್ ಕಾಲೇಜಿನಲ್ಲೂ ಪ್ರಾರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ .!!!”
ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದೀಗ ಇದರ ಸಂಘರ್ಷ ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ. ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ…
ಶಿವಮೊಗ್ಗ ಬಾಪೂಜಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ :
ಶಿವಮೊಗ್ಗ : ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ….
ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !
ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…