ಜಿಲ್ಲಾ ಸುದ್ದಿ:
ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು
ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…
ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :
ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್
ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :
ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….
ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :
ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…
ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ
ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…
ರಿಪ್ಪನ್ ಪೇಟೆಯ ಪ್ರಗತಿಪರ ಕೃಷಿಕ ಕೆರೆಹಳ್ಳಿ ಟೀಕಪ್ಪಗೌಡರಿಗೆ ಒಲಿದ “ಅನ್ನದಾತ” ರಾಜ್ಯಪ್ರಶಸ್ತಿ
ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಮೇಲಿನ ಕೆರೆಹಳ್ಳಿಯ ಪ್ರಗತಿಪರ ಕೃಷಿಕ ಟೀಕಪ್ಪ ಗೌಡರಿಗೆ ರಾಜ್ಯಮಟ್ಟದ “ಅನ್ನದಾತ” ಎಂಬ ಪ್ರಶಸ್ತಿಯು ಒಲಿದು ಬಂದಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ಮಲೆನಾಡಿನ ಹೆಮ್ಮೆಯ ಪ್ರಗತಿಪರ ಕೃಷಿಕ ಕೆ ವಿ ಟೀಕಪ್ಪಗೌಡರಿಗೆ “ಅನ್ನದಾತ” ಎಂಬ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ…
ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಮಲೆನಾಡಿನ ತವರೂರು ರಿಪ್ಪನ್ ಪೇಟೆಯ ಯೋಧನಿಗೆ ”ವೀರಯೋಧ ಬಿರುದು” !!!
ಕಾರ್ಗಿಲ್ ಯುದ್ಧದ ಸಮಯದಲ್ಲಿ ಶತ್ರುಗಳನ್ನು ಹೆಡೆಮುರಿ ಕಟ್ಟಿ ಭಾರತ ದೇಶದ ಕಾರ್ಗಿಲ್ ವಿಜಯೋತ್ಸವಕ್ಕೆ ತನ್ನದೇ ಆದಂತಹ ಕೊಡುಗೆ ನೀಡಿದಂತಹ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದ ನಿವಾಸಿ ಹಾಗೂ ಮಾಜಿ ಯೋಧ ಶ್ರೀನಿವಾಸ್ ಕೆ ಆರ್ ಅವರಿಗೆ ಇದೀಗ “ವೀರಯೋಧ” ಎಂಬ ಬಿರುದು ಲಭಿಸಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ” ಎಂಬ ಸಾಹಿತ್ಯ ಕಾರ್ಯಕ್ರಮದಲ್ಲಿ ನಮ್ಮ ಮಲೆನಾಡಿನ…
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 12 ಮಂದಿ ಪೊಲೀಸ್ ವಶಕ್ಕೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ.12 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು. ಸದ್ಯ ಶಿವಮೊಗ್ಗ…
ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…
ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.
ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ, ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು. ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…