ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ
ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ ಹಲವಾರು…