ಜಿಲ್ಲಾ ಸುದ್ದಿ:
ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ
ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….
RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ
RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…
Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು
Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…
ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು
ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…
HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ
HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ…
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ
ರಿಪ್ಪನ್ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…
ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ
ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ ರಿಪ್ಪನ್ ಪೇಟೆ : ಹರತಾಳು ಗ್ರಾಮದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ…
ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ
ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…
ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!
ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…