ಜಿಲ್ಲಾ ಸುದ್ದಿ:
ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ
ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…
ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು
ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….
ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…
ಶಿವಮೊಗ್ಗದಲ್ಲಿ ಆರಂಭವಾಗಲಿದೆ ಪೈಲಟ್ ತರಬೇತಿ ಕೋರ್ಸ್
ಶಿವಮೊಗ್ಗದಲ್ಲಿ ಆರಂಭವಾಗಲಿದೆ ಪೈಲಟ್ ತರಬೇತಿ ಕೋರ್ಸ್ ಶಿವಮೊಗ್ಗ/ಬೆಂಗಳೂರು : ಕರ್ನಾಟಕ ಸರ್ಕಾರವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಆರ್ಗನೈಸೇಶನ್ (FTO) ಸ್ಥಾಪಿಸಲು ನಿರ್ಧರಿಸಿದೆ. ಇದು ರಾಜ್ಯದ ಮೊದಲ ಸರ್ಕಾರಿ ಫ್ಲೈಟ್ ತರಬೇತಿ ಸಂಸ್ಥೆಯಾಗಿದ್ದು, ವಿಮಾನ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಡಲಿದೆ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (KSIIDC) ಕಾರ್ಯಗತಗೊಳಿಸಲಿದೆ. ಈ ಮೂಲಕ ಪ್ರದೇಶವು ವಿಮಾನಯಾನ ಶಿಕ್ಷಣದ ಕೇಂದ್ರವಾಗಲಿದೆ. ಈ ತರಬೇತಿ ಸಂಸ್ಥೆಯು ವಾಣಿಜ್ಯ ವಿಮಾನ ಚಾಲಕರ ತರಬೇತಿ…
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು. ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ ಅವರ ನೇತೃತ್ವದಲ್ಲಿ…
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಸೇರಿದಂತೆ ಹಲವು…
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…