Headlines

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ ರಿಪ್ಪನ್‌ಪೇಟೆ;-ಇಲ್ಲಿನ ಗವಟೂರು ಗ್ರಾಮದಲ್ಲಿ ಕಳೆದ ಐದಾರು ದಿನಗಳ ಹಿಂದೆ ಟಿಸಿ ಸುಟ್ಟುಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತ್‌ನಿಂದ ಪೈಪ್ ಲೈನ್ ಮೂಲಕ ಸರಬರಾಜು ಮಾಡಲಾಗುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರದೇ ಇದ್ದು ಈ ಕುರಿತು ಗ್ರಾಮಾಡಳಿತದ ಗಮನಕ್ಕೆ ತರಲಾದರೂ ಕೂಡಾ ಪ್ರಯೋಜನವಾಗಿಲ್ಲ ಮತ್ತು ಮೆಸ್ಕಾಂ ಇಲಾಖೆಯವರಿಗೆ ಸಾರ್ವಜನಿಕರು ಗವಟೂರು ಬಳಿಯಲ್ಲಿ…

Read More

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…

Read More

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More