ಜಿಲ್ಲಾ ಸುದ್ದಿ:
ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ
ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ: ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು, ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…
RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ
RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…
HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??
HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…
ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ
ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…
RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ
RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…
ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ
ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ: ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50) ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…
HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ
HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…
ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ
ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್ ಎಂಬುವರಿಗೆ ಸೇರಿದ 23 ಕ್ವಿಂಟಾಲ್ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….
ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ
ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…
ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ
ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…