ಜಿಲ್ಲಾ ಸುದ್ದಿ:
ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ
ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…
ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ
ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….
ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –
ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…
ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ
ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ ಶಿವಮೊಗ್ಗ: ವೃತ್ತಿಯ ಜತೆಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ರಕ್ತದಾನಿ, ಪರಿಸರ ಪ್ರೇಮಿ, ಸಮಾಜ ಸೇವಕ, ಭದ್ರಾವತಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಹಾಲೇಶಪ್ಪ ಅವರಿಗೆ ಶಿವಮೊಗ್ಗ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಸ್ಪಂದನ ಹೆಲ್ತ್ ಫೌಂಡೇಷನ್, ಸಂಜೀವಿನಿ ರಕ್ತನಿಧಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸ್ಪಂದನ ಹೆಲ್ತ್ ಫೌಂಡೇಷನ್ ಅಧ್ಯಕ್ಷ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಉಪಾಧ್ಯಕ್ಷ ತಾರಾನಾಥ್ ಮಾತನಾಡಿ, ಹಾಲೇಶಪ್ಪ ಅವರು ಈಗಾಗಲೇ ೪೪ ಬಾರಿ ರಕ್ತದಾನ ಮಾಡಿ…
ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..
ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…
ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು
ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…
ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್
ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…
ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ
ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…
NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ
NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ: ಬಿ.ಆರ್.ಅಂಬೇಡ್ಕರ್ ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್ ಶಾ ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…
ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್
ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….