Headlines

ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು‌. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್…

Read Full News

ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…

Read Full News

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read Full News

ವೀರಶೈವ ಲಿಂಗಾಯತ ಮಹಾಸಭಾದಿಂದ ಬ್ರಹ್ಮೇಶ್ವರದಲ್ಲಿ ಜ.08 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ|bsy

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕ್ ಘಟಕ ಹಾಗೂ ಬ್ರಹ್ಮೇಶ್ವರ ವೀರಭದ್ರೇಶ್ವರ ಸೇವಾ ಸಮಿತಿಯವರು ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮೇಶ್ವರದ ವೀರಶೈವ ಸಭಾಭವನದಲ್ಲಿ ದಣಿವರಿಯದ ಜನನಾಯಕ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಬಿ.ಯುವರಾಜ್ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಸನ್ಮಾನ ಸಮಾರಂಭದ ದಿವ್ಯಸಾನಿಧ್ಯವನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ವಹಿಸುವರು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ…

Read Full News

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ. ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ…

Read Full News

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read Full News

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read Full News

ಪ್ರಸನ್ನ ಭಟ್ ರವರ ಅಂತಿಮ ದರ್ಶನಕ್ಕೆ ಹೊಸನಗರದಲ್ಲಿ ಭಾರಿ ಸಂಖ್ಯೆಯಲ್ಲಿ ಜನ – ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ|procession

ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.  ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ,…

Read Full News

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read Full News

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read Full News

ರಿಪ್ಪನ್‌ಪೇಟೆ : ಕಳಪೆ ರಸ್ತೆ ಕಾಮಗಾರಿ ಕಂಡು ಸಿಡಿಮಿಡಿಗೊಂಡ ಶಾಸಕ ಹರತಾಳು ಹಾಲಪ್ಪ |Ripponpet

ರಿಪ್ಪನ್‌ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು. ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು…

Read Full News

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read Full News

ಶಿವಮೊಗ್ಗದಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್ – ಹಲವೆಡೆ ಭೇಟಿ : ಮೂರು ದಿನಗಳ ಜಿಲ್ಲಾ ಪ್ರವಾಸ|shimoga

ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್​ಎಸ್​ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್​ಎಸ್​ಎಸ್​ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಗರದ ಹೊನ್ನಾಳಿ ರಸ್ತೆಯಲ್ಲಿರುವ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ 50 ಜನರ ಪ್ರಮುಖರ ಸಭೆ ನಡೆದಿದೆ. ಸಭೆ ಮುಗಿಸಿದ ನಂತರ ಮೋಹನ್…

Read Full News

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read Full News

ಹೊಸನಗರ : ಬಿದನೂರಿನ ಮಾಷುಂಷಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ರಚನೆ|nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್…

Read Full News

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…

Read Full News

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read Full News

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read Full News

ಕೊರೊನಾ ನಾಲ್ಕನೇ ಅಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಲ್ಲ, ಆತಂಕ ಬೇಡ : ಕೋಡಿ ಮಠದ ಶ್ರೀಗಳು|kodimaTT

  ಕೊರೊನಾ ನಾಲ್ಕನೇ ಅಲೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ.ಕೊರೊನಾ ಬಂದು ಹೋಗುತ್ತದೆ. ಈ ಬಾರಿಯ ಕೊರೊನಾ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡುವ ಅವಶ್ಯಕೆತಯಿಲ್ಲ.ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ. ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ…

Read Full News

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read Full News

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read Full News

ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith

ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…

Read Full News

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read Full News

ತುಂಗಾ ನದಿಯ ತೀರದಲ್ಲಿ ವಿಜೃಂಭಣೆಯ ತೆಪ್ಪೋತ್ಸವ – ಸಡಗರದ ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ|thirthahalli

ತೀರ್ಥಹಳ್ಳಿ: ತುಂಗಾ ನದಿಯ ದಂಡೆಯ  ಮೇಲಿನಿಂದ ಸಿಡಿದ ಸಿಡಿಮದ್ದುಗಳು ವರ್ಣರಂಜಿತವಾಗಿ ಮುಗಿಲಿಗೆ ಅಪ್ಪಳಿಸಿದವು. ಮರಳು ದಿಬ್ಬದ ಮೇಲೆ ಹಾತೊರೆದು ಕುಳಿತಿದ್ದ ಜನತೆ ಕೇಕೆ ಹಾಕಿದರು.  ಶ್ರೀ ರಾಮೇಶ್ವರ ಎಳ್ಳಾಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಭಾನುವಾರ ತುಂಗಾನದಿಯಲ್ಲಿ ದೇವರ ತೆಪ್ಪೋತ್ಸವ ಜನಾಕರ್ಷಣೆಯ ಕೇಂದ್ರ ಬಿಂದುವಾಯಿತು. ತೆಪ್ಪೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಜನ ಸಾಗರವೇ ಹರಿದು ಬಂದಿತ್ತು. ತುಂಗಾ ನದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಮೂರು ಸುತ್ತು ನದಿಯಲ್ಲಿ ತಿರುಗಿಸಿ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ…

Read Full News

ಹೊಸ ವರ್ಷದ ಹೊಸ್ತಿಲಲ್ಲಿ ಯುವಕರು ಹಾಗೂ ವಾಹನ ಚಾಲಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ :|accident awareness

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು…

Read Full News

ಜಗತ್ತಿಗೆ ಶಾಂತಿ,ಸಹಬಾಳ್ವೆ ಪ್ರೀತಿಯ ಸಂದೇಶ ಸಾರಿದ ಶಾಂತಿದೂತ ಯೇಸು ಕ್ರಿಸ್ತರು – ರೆ. ಫಾ ಬಿನೋಯ್|Christmas

ರಿಪ್ಪನ್ ಪೇಟೆ : ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್ ಎಂದು ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೆಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ  ಆಯೋಜಿಸಿದ್ದ ಧಾರ್ಮಿಕ ಪೂಜೆಯಲ್ಲಿ ಭಾಗವಹಿಸಿ  ಶುಭ ಸಂದೇಶವನ್ನು ನೀಡಿದ ಅವರು ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ…

Read Full News

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read Full News

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read Full News

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.     ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ…

Read Full News

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read Full News