Headlines

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More

HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ

HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್‌ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ…

Read More