ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…