Headlines

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More
Exit mobile version