ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಘು ಹೃದಯಾಘಾತದಿಂದ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಇಸಿಜಿ ಸೇರಿ ಹಲವು ಪರೀಕ್ಷೆಗಳನ್ನ ಮಾಡುತ್ತಿದ್ದು ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ. ಹಾಗೆಯೇ ಐಸಿಯುನಲ್ಲಿ ನಟ ಪುನೀತ್ ರಾಜ್ ಕುಮಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಟ ಪುನೀತ್ ರಾಜ್ ಕುಮಾರ್…

Read More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್,ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ:

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

  ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….

Read More

ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ರವರ ಲೋನ್ ಗೆ ಜಾಮೀನು ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ

ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…

Read More