ಹೊಸ ವರ್ಷ ಸಂಭ್ರಮಾಚರಣೆಯ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ
ನಿಮ್ಮ ಸಾವು ಸಮಾಜಕ್ಕೆ ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…