
ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ
ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…