ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್​ ಪ್ರದಾನ :

ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್​ ಸ್ಟಾರ್ ಪುನೀತ್ ರಾಜ್‍ಕುಮಾರ್​ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡುವ ಕುರಿತು ಚರ್ಚೆ ಮಾಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿ.ವೈ. ರಾಘವೇಂದ್ರ,…

Read More

ಯಡಿಯೂರಪ್ಪ ಹುಟ್ಟುಹಬ್ಬ: 79 ಕೆಜಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂತಸ ಹೆಚ್ಚಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಸರಳವಾಗಿ ಆಚರಿಸಿದರು. ಗಣ್ಯರು, ಅಭಿಮಾನಿಗಳು ಬಿಎಸ್​ವೈ ಅವರಿಗೆ ಶೂಭಕೋರಿದ್ದಾರೆ. ಬೆಂಗಳೂರಲ್ಲಿ ಬಿಎಸ್​ವೈ ಬೃಹತ್​ ಕೇಕ್​ ಕತ್ತರಿಸಿದರು. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪ, ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಬಿಎಸ್​ವೈ ಅಭಿಮಾನಿಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. 79 ಕೆಜಿ ತೂಕದ ಕೇಕ್ ಕತ್ತರಿಸಿದ ಬಿಎಸ್‌ವೈ:  ಬಿಎಸ್‌ವೈ 79ನೇ ಜನ್ಮ ದಿನದ ನಿಮಿತ್ತ 79 ಕೆ.ಜಿ. ತೂಕದ ಕೇಕ್‌ ಅನ್ನು ಕಾವೇರಿ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More

ಸಮನ್ವಯ ಕವಿ ನಾಡೋಜ ಚೆನ್ನವೀರ ಕಣವಿ ನಿಧನ

 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ…

Read More