Headlines

ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಶ್ವರಪ್ಪ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​! ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ. ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ…

Read More

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು.  ನಾನು ಸಂತೋಷ್ ಮುಖವನ್ನೇ ನೋಡಿಲ್ಲ….

Read More

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ಈಶ್ವರಪ್ಪನವರದ್ದು ಒಂದು ಜನ್ಮ ನಾ : ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಮಾಧ್ಯಮದೊಂದಿಗೆ ಅಳುತ್ತಾ tv9 ಮಾಧ್ಯಮದೊಂದಿಗೆ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ. 40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More