ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…