ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ
ತುಮಕೂರು: ಆರ್‌ಎಸ್‌ಎಸ್, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…