Headlines

ಅಂತರ್ಜಾಲ ಮಕ್ಕಳ ಕವಿಗೋಷ್ಟಿಯಿಂದ 75ನೇ ಸ್ವಾತಂತ್ರ್ಯ ಸಂಭ್ರಮ:

ಶಿವಮೊಗ್ಗ : ೭೫ ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ಅಂತರ್ಜಾಲದ ಮೂಲಕ ದಿನಾಂಕ:15-08-2021 ನೇ ಭಾನುವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿಯ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ೩೫ ಮಕ್ಕಳು ಭಾಗವಹಿಸಿ ಸ್ವಾತಂತ್ರ್ಯದ ಹಣತೆ ಎಂಬ ವಿಷಯದ ಮೇಲೆ ಕವಿತೆ ಬರೆದು ವಾಚಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ.ರಾ.ಬ.ಸಂ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಹೆಚ್ ಮಹೇಶ್ ರವರು ಸಂಘದ ಸಾಧನೆಗಳನ್ನು ಸವಿವರವಾಗಿ ವಿವರಿಸಿದರು. ಶಿವಮೊಗ್ಗ ಜಿಲ್ಲಾ…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಖ್ಯಾತ ನಟಿ ಜಯಂತಿ ಇನ್ನಿಲ್ಲ:

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 26 ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದ ನಟಿ ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು…

Read More

ವಾಯುಭಾರ ಕುಸಿತ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ:

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ,…

Read More

ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More