Headlines

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು! ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು….

Read More

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ..ಛಿದ್ರ ಹೇರ್​ ಡ್ರೈಯರ್​​ ಮೆಷಿನ್​​ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರ..ಛಿದ್ರಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬಾಗಲಕೋಟೆ ಇಳಕಲ್ಲದ ಬಸವನಗರದಲ್ಲಿ ನಡೆದಿದೆ. ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಗಾಯಗೊಂಡವರು. ಸ್ನೇಹಿತೆಗೆ ಬಂದಿದ್ದ ಪಾರ್ಸಲ್ ನ್ನು ತೆರೆದು ಅದರಲ್ಲಿದ್ದ ಹೇರ್ ಡ್ರೈಯರ್ ಆನ್ ಮಾಡಿದಾಗ ತಕ್ಷಣ ಸ್ಫೋಟಗೊಂಡು ಈಗ ಆಸ್ಪತ್ರೆಗೆ ಸೇರಿದ್ದಾರೆ. ನಡೆದಿದ್ದೇನು.!? ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಕೊರಿಯರ್ ಮೂಲಕ ​ಬಂದಿತ್ತು….

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ…

Read More

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More