ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ
ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…


