ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!

 ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :

ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.  ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.  ‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ…

Read More