ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…