ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು
ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…