ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ  ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ. ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಶಿವಮೊಗ್ಗ: ನೂತನ ಸುದ್ದಿವಾಹಿನಿ ಟಿವಿ12 ಕನ್ನಡ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆ

  ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ TV12 ಕನ್ನಡ ಸುದ್ದಿವಾಹಿನಿಯ “ಲೋಗೋ” ವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ ರವರು ಜ್ಯೋತಿ ಬೆಳಗಿಸುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಗರದ ಮಥುರಾ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಟಿವಿ೧೨ ಕನ್ನಡ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ರವರು ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ಹಾಗೂ ಪತ್ರೀಕಾರಂಗದ ಕ್ಷೇತ್ರವು ನಮ್ಮ ಸಾಮಾಜಿಕ ಕ್ಷೇತ್ರದ…

Read More

ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More