Headlines

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ

ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…

Read More

ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ

ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.  ರಾತ್ರಿ 9-15 ರ ಸುಮಾರಿನಲ್ಲಿ  ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ.  ಕೊಲೆಯಾದ ಟ್ವಿಸ್ಟ್  ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ  ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…

Read More

ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ : ಡಿಎಚ್ಒ ರಾಜೇಶ್ ಸುರಗೀಹಳ್ಳಿ

ಶಿವಮೊಗ್ಗ : ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಟಾ 2003 ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಕುರಿತು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಗರದ ಐಎಂಎ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಚ್ಒ ರಾಜೇಶ್ ಸುರಗೀಹಳ್ಳಿ ಅವರು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಅತಿ ಹೆಚ್ಚಿದೆ. ಆದರೆ ಈ ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಬೆಂಗಳೂರಿನಲ್ಲಿ ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ ಮಾಡುವ ಪ್ರಯೋಗ ಆರಂಭಿಸಲಾಗಿದೆ….

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

ಶಿವಮೊಗ್ಗ : ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿವಸ ಆಚರಣೆ

ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್‌ ವತಿಯಿಂದ ಆಚರಿಸಲಾಯಿತು. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ…

Read More

ಶಿವಮೊಗ್ಗ : ರಾತ್ರೋರಾತ್ರಿ ದೇವಸ್ಥಾನ ಕೆಡವಿ,ಅರ್ಚಕನ ಕಣ್ಣಲ್ಲಿ ನೀರು ತರಿಸಿದರು : ಗೋಪಾಲಕೃಷ್ಣ ಬೇಳೂರು

  ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ…

Read More

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More