ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ದತೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ನಾಳೆ ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲು ಅದ್ದೂರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಇಂದಿನಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ದತೆ ಮಾಡಿಕೊಂಡಿದ್ದು, ನಾಳೆ ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ   ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ – ಕುಂಕುಮ ನೀಡಲಾಗುವುದು. ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಲಕ್ಷ್ಮೀ ಪೂಜೆ ಮಾಡಿ ಮನೆಗೆ ಲಕ್ಷ್ಮೀಯನ್ನು ಕೂರಿಸಿ ಆರಾಧನೆ ಮಾಡಲಾಗುತ್ತೆ….

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ರಿಪ್ಪನ್‌ಪೇಟೆ : ಮೇಯಲು ಬಿಟ್ಟಿದ್ದ 15 ಹಸುಗಳು ನಾಪತ್ತೆ – ದೂರು ದಾಖಲು

ರಿಪ್ಪನ್‌ಪೇಟೆ : ಮೇಯಲು ಬಿಟ್ಟಿದ್ದ 15 ಹಸುಗಳು ನಾಪತ್ತೆಯಾಗಿರುವ ಫ಼ಟನೆ ಪಟ್ಟಣದ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ದೇವರಾಜ್ ಗೌಡ ರವರಿಗೆ ಸೇರಿದ 15 ಹಸುಗಳನ್ನು 21-07-2022 ರಂದು ಮನೆಯ ಬಳಿಯೇ ಮೇಯಲು ಬಿಡಲಾಗಿತ್ತು ಸಂಜೆಯ ವೇಳೆ ಮನೆಗೆ ಹಸುಗಳು ಬಾರದೇ ಇದ್ದಾಗ ಎಲ್ಲಾ ಕಡೆ ಹುಡುಕಿದ್ದಾರೆ.ಸತತ ನಾಲ್ಕು ದಿನ ಹಸುಗಳನ್ನು ಹುಡುಕಿ ಪತ್ತೆಯಾಗದ ಹಿನ್ನಲೆಯಲ್ಲಿ ಇಂದು (26-07-2022) ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :

ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…

Read More